alex Certify ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿ ಹೊರತಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇಕಡ 5 ರಷ್ಟು ರಿಯಾಯಿತಿ ಆಗಸ್ಟ್ 31 ರ ವರೆಗೆ ವಿಸ್ತರಣೆ ಮಾಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯಿಂದ ಈ ಕುರಿತಾಗಿ ಆದೇಶ ಹೊರಡಿಸಲಾಗಿದ್ದು, ನಿಗದಿತ ಅವಧಿಯೊಳಗೆ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಕೊರೊನಾ ಕಾರಣದಿಂದಾಗಿ 2021 – 22 ನೇ ಸಾಲಿನಲ್ಲಿ ರಿಯಾಯಿತಿ ಸೌಲಭ್ಯ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಣೆ ಮಾಡಲಾಗಿತ್ತು.

ಈಗ ಆಗಸ್ಟ್ 31 ರ ವರೆಗೆ ತೆರಿಗೆ ಪಾವತಿಸುವವರಿಗೆ ಶೇಕಡ 5 ರಷ್ಟು ರಿಯಾಯಿತಿ ನೀಡುವಂತೆ ಆದೇಶ ಹೊರಡಿಸಲಾಗಿದೆ. ಜುಲೈ ಕೊನೆ ನಂತರ ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಒಟ್ಟು ಮೊತ್ತದ ಶೇಕಡ 2 ರಷ್ಟು ದಂಡ ವಿಧಿಸಲು ಈ ಹಿಂದೆ ಆದೇಶ ಹೊರಡಿಸಲಾಗಿದ್ದು, ರಿಯಾಯಿತಿಯೊಂದಿಗೆ ದಂಡ ವಿಧಿಸುವುದನ್ನೂ ಕೂಡ ಮುಂದೂಡಲಾಗಿದೆ. ಆಗಸ್ಟ್ 31 ರ ವರೆಗೆ ಶೇಕಡ 5 ರಷ್ಟು ರಿಯಾಯಿತಿ ಸಿಗಲಿದ್ದು, ಸೆಪ್ಟಂಬರ್ 1 ರಿಂದ ದಂಡ ಅನ್ವಯವಾಗಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...