alex Certify ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಅಸ್ತು ಎಂದಿದೆ. ಮಹಾನಗರ ಪಾಲಿಕೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ಎರಡು ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಯಾಗಲಿದೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ನಗರಪಾಲಿಕೆಗಳ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದ ಕರ್ನಾಟಕ ನಗರಪಾಲಿಕೆಗಳ ತಿದ್ದುಪಡಿ ವಿಧೇಯಕ -2021 ಮಂಡಿಸಿದ್ದಾರೆ.

ಪುರಸಭೆಗಳಿಗೆ ಸಂಬಂಧಿಸಿದ ವಿಧೇಯಕವನ್ನು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಮಂಡಿಸಿ ವಿವರಣೆ ನೀಡಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಬಾರದೆಂದು ಒತ್ತಾಯಿಸಿದ್ದಾರೆ.

ಆದರೆ, ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು, ಸರ್ಕಾರದ ಅನುದಾನ ಅವಲಂಬನೆ ತಪ್ಪಿಸಲು, ಅಭಿವೃದ್ಧಿ ಕೆಲಸ ಮೂಲಸೌಕರ್ಯ ಕಲ್ಪಿಸಲು, ಹೆಚ್ಚಿನ ಸಂಪನ್ಮೂಲ ಸಂಗ್ರಹಕ್ಕೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಕೇಂದ್ರದ ಮಾರ್ಗಸೂಚಿಗೆ ಅನುಗುಣವಾಗಿ ತೆರಿಗೆ ವ್ಯವಸ್ಥೆ ಸುಧಾರಣೆ ತರಬೇಕಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಆಸ್ತಿ ತೆರಿಗೆ ಪಾವತಿದಾರರಿಗೆ ಏಪ್ರಿಲ್ ವರೆಗೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಆಸ್ತಿ ತೆರಿಗೆ ವ್ಯವಸ್ಥೆ ಪರಿಷ್ಕರಣೆ ಹಾಗೂ ಸರಳೀಕೃತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೆ ಬರಲಿದೆ. ಬೇರೆಬೇರೆ ಪ್ರದೇಶ, ಕಟ್ಟಡ, ನಿವೇಶನಗಳಿಗೆ ಬೇರೆ ಬೇರೆ ತೆರಿಗೆ ದರ ನಿಗದಿಪಡಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...