ಬೆಂಗಳೂರು: ರಾಜ್ಯ ಸರ್ಕಾರ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳ ಮಾಡಲು ತೀರ್ಮಾನಿಸಿದೆ.
ನಿವೇಶನಕ್ಕೆ ಕೂಡ ಇನ್ನು ಮುಂದೆ ತೆರಿಗೆ ಕಡ್ಡಾಯ ಆಗಿರುತ್ತದೆ. ನಗರ ಹಾಗೂ ಪಟ್ಟಣಗಳ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ. 1000 ಚ. ಅಡಿಗಿಂತ ಹೆಚ್ಚು ವಿಸ್ತೀರ್ಣದ ಖಾಲಿ ನಿವೇಶನಕ್ಕೆ ತೆರಿಗೆ ವಿಧಿಸಲಾಗುವುದು. ಬಿಬಿಎಂಪಿ ಹೊರತುಪಡಿಸಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲಾಗುವುದು. ಸ್ಥಳೀಯ ಸಂಸ್ಥೆಗಳ ಆದಾಯ ವೃದ್ಧಿಸಿಕೊಳ್ಳಬೇಕೆಂಬ ಕೇಂದ್ರದ ಷರತ್ತು ಅನ್ವಯ ತೆರಿಗೆ ಹೆಚ್ಚಳಕ್ಕೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.