alex Certify ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿತೆರಿಗೆ ಮೇಲಿನ ಶೇಕಡ 5 ರಷ್ಟು ರಿಯಾಯಿತಿ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಆಸ್ತಿ ತೆರಿಗೆ ಪಾವತಿ ವಿಳಂಬ ದಂಡ ವಿಧಿಸುವ ಅವಧಿಯನ್ನು ನವೆಂಬರ್ 1 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಆಸ್ತಿ ತೆರಿಗೆಗೆ ಜುಲೈ 31 ರವರೆಗೆ ರಿಯಾಯಿತಿ, ನವೆಂಬರ್ 1 ರ ವರೆಗೆ ವಿಳಂಬ ಪಾವತಿ ದಂಡ ಅವಧಿ ವಿಸ್ತರಿಸಲಾಗಿದೆ. ಲಾಕ್ ಡೌನ್ ಜಾರಿಯಾಗಿದ್ದರಿಂದ ತೆರಿಗೆ ಪಾವತಿದಾರರಿಗೆ ಅನುಕೂಲವಾಗುವಂತೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...