ಚಂಡೀಗಢ: ಕಾಂಗ್ರೆಸ್ ಆಡಳಿತದ ಪಂಜಾಬ್ ರಾಜ್ಯದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲಾಗಿದೆ.
ಪ್ರತಿ ಲೀಟರ್ ಪೆಟ್ರೋಲ್ ದರವನ್ನು 10 ರೂ., ಡೀಸೆಲ್ ದರವನ್ನು 5 ರೂ ಇಳಿಕೆ ಮಾಡಲಾಗುವುದು ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರು ಘೋಷಣೆ ಮಾಡಿದ್ದಾರೆ.
ಇಂದು ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ ಲೀಟರ್‌ಗೆ 10 ರೂ. ಮತ್ತು 5 ರೂ. ಇಳಿಸಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ತೈಲದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿದ ನಂತರ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವ್ಯಾಟ್ ಇಳಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತ ಮಾಡಲಾಗಿದೆ. ಈಗ ಕಾಂಗ್ರೆಸ್ ಆಡಳಿತದ ಪಂಜಾಬ್ ರಾಜ್ಯದಲ್ಲಿಯೂ ತೈಲ ಬೆಲೆ ಇಳಿಸಲಾಗಿದೆ. ವಿಧಾನಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.