
ನವದೆಹಲಿ: ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಅಕ್ಟೋಬರ್ 15 ರಿಂದ ನವೆಂಬರ್ 30 ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಯೋಜಿಸಿದೆ.
ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಸಿಇಓ ವಿ.ಕೆ. ಯಾದವ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಹಬ್ಬದ ಅವಧಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಕ್ಟೋಬರ್ 15 ರಿಂದ ನವೆಂಬರ್ 30 ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತಾಗಿ ರೈಲ್ವೆ ವಲಯಗಳ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಲಾಗಿದ್ದು ಸ್ಥಳೀಯ ಆಡಳಿತಗಳೊಂದಿಗೆ ಚರ್ಚಿಸಿ ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ. ರಜೆ ಅವಧಿಯಲ್ಲಿ ಮತ್ತು ಹಬ್ಬದ ದಿನಗಳಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ಹೇಳಿದ್ದಾರೆ.