alex Certify ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಅಕ್ಟೋಬರ್ 15 ರಿಂದ ನವೆಂಬರ್ 30 ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಯೋಜಿಸಿದೆ.

ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಸಿಇಓ ವಿ.ಕೆ. ಯಾದವ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಹಬ್ಬದ ಅವಧಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಕ್ಟೋಬರ್ 15 ರಿಂದ ನವೆಂಬರ್ 30 ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತಾಗಿ ರೈಲ್ವೆ ವಲಯಗಳ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಲಾಗಿದ್ದು ಸ್ಥಳೀಯ ಆಡಳಿತಗಳೊಂದಿಗೆ ಚರ್ಚಿಸಿ ಕೊರೋನಾ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ. ರಜೆ ಅವಧಿಯಲ್ಲಿ ಮತ್ತು ಹಬ್ಬದ ದಿನಗಳಲ್ಲಿ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...