ಜೈಪುರ್: ದೇಶದಲ್ಲಿ ಮೊದಲ ಬಾರಿಗೆ ರಾಜಸ್ಥಾನದಲ್ಲಿ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.
ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಉಚಿತ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ಚಿರಂಜೀವಿ ಆರೋಗ್ಯ ವಿಮೆ ಯೋಜನೆಯನ್ನು ರಾಜಸ್ಥಾನ ಸರ್ಕಾರ ಜಾರಿಗೊಳಿಸಿದೆ. ಗುರುವಾರದಿಂದಲೇ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿನ ಪ್ರತಿ ಜನತೆಗೆ ಆರೋಗ್ಯ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಲಾಗಿದೆ. ಜನರು ತಮ್ಮ ಹೆಸರನ್ನು ನೊಂದಾಯಿಸಿಕೊಂಡು ನಗದು ರಹಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.