ನವದೆಹಲಿ: UPA ಸರ್ಕಾರದ ಅವಧಿಯಲ್ಲಿ ಇದ್ದ ಈಗಿನ ಪ್ರಧಾನಿ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಹೆಚ್ಚಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರುತ್ತಿರುವುದರಿಂದ ತೈಲ ದರ ಇಳಿಕೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.
ಅಂದ ಹಾಗೆ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 31.80 ಅಬಕಾರಿ ಸುಂಕ ವಿದಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಮೇಲೆ 9.20 ರೂ., ಡೀಸೆಲ್ ಬೆಲೆ 3.46 ರೂಪಾಯಿ ಅಬಕಾರಿ ಸುಂಕ ಇತ್ತು. ಈಗ ಅಬಕಾರಿ ಸುಂಕವನ್ನು ಬರೋಬ್ಬರಿ 31.80 ರೂ.ನಷ್ಟು ಏರಿಕೆ ಮಾಡಲಾಗಿದೆ. ಈ ಸುಂಕವನ್ನು ಕಡಿತ ಮಾಡಬೇಕೆಂಬುದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಆಗ್ರಹಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಮೋದಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳೇ ಕಾರಣ ಎಂದು ಅವರು ಆರೋಪಿಸಿದ್ದಾರೆ.