ಜೈಪುರ್: ರಾಜಸ್ಥಾನದಲ್ಲಿ ಮೇ 1 ರಿಂದ ಸಾರ್ವತ್ರಿಕ ಆರೋಗ್ಯ ವಿಮೆ ಯೋಜನೆ ಜಾರಿಯಾಗಲಿದೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಸಾರ್ವತ್ರಿಕ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಮೇ 1 ರಿಂದ ಆರಂಭವಾಗಲಿರುವ ಸಾರ್ವತ್ರಿಕ ಆರೋಗ್ಯ ಯೋಜನೆಗೆ ಏಪ್ರಿಲ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಯೋಜನೆ ಅನ್ವಯ ಯಾವುದೇ ಕುಟುಂಬ ವಾರ್ಷಿಕ 850 ರೂಪಾಯಿ ಪಾವತಿಸಿ 5 ಲಕ್ಷ ರೂಪಾಯಿವರೆಗೆ ಆರೋಗ್ಯವಿಮೆ ಸೌಲಭ್ಯ ಪಡೆಯಬಹುದಾಗಿದೆ.
ಬಜೆಟ್ ನಲ್ಲಿ ಘೋಷಿಸಲಾದಂತೆ ಸಾರ್ವತ್ರಿಕ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.