ನವದೆಹಲಿ: ಕ್ರಿಪ್ಟೋ ಕರೆನ್ಸಿ ಅಪಾಯಕಾರಿ, ಅದಕ್ಕೆ ಯಾವುದೇ ಮಾನ್ಯತೆಯಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಗವರ್ನರ್ ಶಕ್ತಿಕಾಂತ್ ದಾಸ್ ಎಚ್ಚರಿಕೆ ನೀಡಿದ್ದಾರೆ.
ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡುವುದು ನಿಮ್ಮದೇ ರಿಸ್ಕ್ ಆಗಿರುತ್ತದೆ. ಕ್ರಿಪ್ಟೋ ಕರೆನ್ಸಿಗೆ ಯಾವುದೇ ಆಧಾರ, ಮೌಲ್ಯ ಇರುವುದಿಲ್ಲ. ಅದು ಆರ್ಥಿಕತೆ ಮತ್ತು ಆರ್ಥಿಕ ಸ್ಥಿರತೆಗೆ ಈ ಅಪಾಯಕಾರಿಯಾಗಿವೆ. ಆರ್ಥಿಕತೆ ನಿರ್ವಹಿಸುವ ಆರ್ಬಿಐ ಸಾಮರ್ಥ್ಯಕ್ಕೂ ಅಪಾಯಕಾರಿಯಾಗಿವೆ. ಇದರಲ್ಲಿ ಹೂಡಿಕೆ ಮಾಡುವುದರ ಬಗ್ಗೆ ಜನರನ್ನು ಎಚ್ಚರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.
ಈ ಮೂಲಕ ದೇಶದಲ್ಲಿ ಕ್ರಿಪ್ಟೋ ಕರೆನ್ಸಿಗೆ ಯಾವುದೇ ಮಾನ್ಯತೆ ಇಲ್ಲವೆಂಬುದನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.