alex Certify ಬಿಗ್‌ ನ್ಯೂಸ್: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ RBI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ RBI

आरबीआई ने रेपो रेट पर नहीं दी राहत

ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಪರಿಶೀಲನಾ ಸಭೆಯಲ್ಲಿ ಜನಸಾಮಾನ್ಯರಿಗೆ ಯಾವುದೇ ನೆಮ್ಮದಿ ಸುದ್ದಿ ಸಿಕ್ಕಿಲ್ಲ. ಮೂರು ದಿನಗಳ ಕಾಲ ನಡೆದ ಈ ಸಭೆಯಲ್ಲಿ ರೆಪೊ ದರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ರೆಪೊ ದರದಲ್ಲಿ ಯಾವುದೇ ಬದಲಾವಣೆಯಾಗದ ಕಾರಣ ಇಎಂಐ ಅಥವಾ ಸಾಲದ ಬಡ್ಡಿದರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಈ ಬಾರಿ ಆರ್.ಬಿ.ಐ. ರೆಪೋ ದರವನ್ನು ಇಳಿಕೆ ಮಾಡಿ ಜನಸಾಮಾನ್ಯರಿಗೆ ನೆಮ್ಮದಿ ನೀಡಲಿದೆ ಎಂಬ ನಿರೀಕ್ಷೆಯಿತ್ತು. ಕೊರೊನಾ ಸಂದರ್ಭದಲ್ಲಿ  ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಪರಿಶೀಲನೆಯ ಮೂರನೇ ಸಭೆ ಇದಾಗಿತ್ತು.

ಕೊರೊನಾ ಬಿಕ್ಕಟ್ಟಿನಿಂದಾಗಿ ಹಿಂದೆ ನಡೆದ ಎರಡೂ ಸಭೆಯಲ್ಲಿ ರಿಸರ್ವ್ ಬ್ಯಾಂಕಿನ ಒಟ್ಟು ರೆಪೊ ದರವನ್ನು ಶೇಕಡಾ 1.15 ರಷ್ಟು ಕಡಿಮೆ ಮಾಡಲಾಗಿತ್ತು. ಕಳೆದ ವರ್ಷದ ನಂತರ ಅಂದರೆ 2019 ರ ಫೆಬ್ರವರಿ ನಂತರ ರೆಪೊ ದರವನ್ನು ಶೇಕಡಾ 2.50 ರಷ್ಟು ಕಡಿತಗೊಳಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...