ನವದೆಹಲಿ: ಖನಿಜಗಳ ಬೆಲೆಯಲ್ಲಿ ತೀವ್ರ ಕುಸಿತ ಉಂಟಾಗಿದೆ. ಸಗಟು ಬೆಲೆ ಆಧಾರಿತ ಹಣದುಬ್ಬರ ಜೂನ್ ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಶೇಕಡ 15.18ಕ್ಕೆ ಇಳಿಕೆಯಾಗಿದೆ. ಹೀಗಿದ್ದರೂ, ಆಹಾರ ಪದಾರ್ಥಗಳ ದರ ದುಬಾರಿಯಾಗಿಯೇ ಇದೆ.
ಚಿಲ್ಲರೆ ಮತ್ತು ಸಗಟು ಹಣದುಬ್ಬರ ಜೂನ್ ನಲ್ಲಿ ಅಲ್ಪ ಇಳಿಕೆಯಾಗಿದ್ದರೂ, ಆರ್.ಬಿ.ಐ. ನಿರೀಕ್ಷಿತ ಮಟ್ಟದಲ್ಲಿ ಇಳಿಕೆಯಾಗಿಲ್ಲ. ಆಗಸ್ಟ್ 2 ರಿಂದ ನಡೆಯಲಿರುವ ಆರ್.ಬಿ.ಐ. ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ರೆಪೊ ದರವನ್ನು ಮತ್ತೆ ಏರಿಕೆ ಮಾಡುವ ಸಾಧ್ಯತೆಯಿದ್ದು, ಇದರಿಂದಾಗಿ ಗೃಹ ಸಾಲ, ವಾಹನ ಸಾಲ ಸೇರಿದಂತೆ ಇತರೆ ಸಾಲಗಳ ಮೇಲಿನ ಬಡ್ಡಿ ದರ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.