alex Certify ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ಕೆಳ ಮಧ್ಯಮ ವರ್ಗ ಹಾಗೂ ಬಡವರು ಫ್ಲ್ಯಾಟ್ ಖರೀದಿ ಮಾಡುವುದನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ ಇಳಿಕೆ ಮಾಡಿದೆ. 35 ರಿಂದ 45 ಲಕ್ಷ ರೂಪಾಯಿ ಮೊತ್ತದ ಫ್ಲ್ಯಾಟ್ ಗಳ ಖರೀದಿಗೆ ನಿಗದಿ ಮಾಡಿದ್ದ ಶೇಕಡ 5 ರಷ್ಟು ಮುದ್ರಾಂಕ ಶುಲ್ಕ ಶೇಕಡ 3 ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕಳೆದ ಡಿಸೆಂಬರ್ ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 20 ಲಕ್ಷ ರೂಪಾಯಿವರೆಗಿನ ಮೌಲ್ಯದ ಫ್ಲ್ಯಾಟ್ ಗಳ ಮೊದಲನೇ ನೋಂದಣಿಯ ಸಂದರ್ಭದಲ್ಲಿ ಶೇಕಡ 5 ರಷ್ಟು ಇರುವ ಮುದ್ರಾಂಕ ಶುಲ್ಕವನ್ನು ಶೇಕಡ 2 ರಷ್ಟು ಇಳಿಕೆ ಮಾಡಿದೆ. 20 ರಿಂದ 35 ಲಕ್ಷ ರೂಪಾಯಿ ಮೌಲ್ಯದ ಫ್ಲ್ಯಾಟ್ ಗಳ ಮುದ್ರಾಂಕ ಶುಲ್ಕವನ್ನು ಶೇಕಡ 5 ರಿಂದ ಶೇಕಡ 3 ರಷ್ಟು ಇಳಿಕೆ ಮಾಡಿದೆ.

ಕಳೆದ ಮಾರ್ಚ್ ನಲ್ಲಿ ಮಂಡಿಸಲಾದ ಬಜೆಟ್ನಲ್ಲಿ 35 ರಿಂದ 45 ಲಕ್ಷ ರೂಪಾಯಿ ಮೌಲ್ಯದ ಫ್ಲ್ಯಾಟ್ ಗಳ ನೋಂದಣಿ ವೇಳೆಯಲ್ಲಿಯೂ ಮುದ್ರಾಂಕ ಶುಲ್ಕವನ್ನು ಶೇಕಡ 5 ರಿಂದ 3 ರಷ್ಟು ಇಳಿಕೆ ಮಾಡುವುದಾಗಿ ಘೋಷಿಸಿದ್ದು, ಈಗ ಅನುಷ್ಠಾನಕ್ಕೆ ತರಲಾಗಿದೆ. 35 ರಿಂದ 45 ಲಕ್ಷ ರೂಪಾಯಿ ಮೌಲ್ಯದ ಫ್ಲ್ಯಾಟ್ ಗಳ ಖರೀದಿ ಮುದ್ರಾಂಕ ಶುಲ್ಕವನ್ನು ಶೇಕಡ 3 ಕ್ಕೆ ಇಳಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...