ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಮುದ್ರಾಂಕ ಶುಲ್ಕವನ್ನು ಇಳಿಕೆ ಮಾಡಲಾಗಿದೆ.
20 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಕಡಿಮೆ ಬೆಲೆಯ ಅಪಾರ್ಟ್ ಮೆಂಟ್ ಗಳ ನೋಂದಣಿ ಮುದ್ರಾಂಕ ಶುಲ್ಕವನ್ನು ಶೇಕಡ 2 ರಷ್ಟು ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರ ಈ ಕುರಿತಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂ. ಮತ್ತು ಅದಕ್ಕಿಂತ ಕಡಿಮೆ ಬೆಲೆಯ ಅಪಾರ್ಟ್ ಮೆಂಟ್ ನೋಂದಣಿ ಶುಲ್ಕ ಇಳಿಕೆ ಮಾಡಲಾಗಿದೆ.
ಅದೇ ರೀತಿ, 20 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಮತ್ತು 30 ಲಕ್ಷ ರೂಪಾಯಿವರೆಗಿನ ಅಪಾರ್ಟ್ ಮೆಂಟ್ ಗಳ ಮುದ್ರಾಂಕ ಶುಲ್ಕವನ್ನು ಶೇಕಡ 3 ರಷ್ಟು ನಿಗದಿ ಮಾಡಲಾಗಿದೆ ಎಂದು ಹೇಳಲಾಗಿದೆ.