alex Certify ಪರಿಣಾಮಕಾರಿ ರೇರಾ ಕಾಯ್ದೆ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಣಾಮಕಾರಿ ರೇರಾ ಕಾಯ್ದೆ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ ಕಾಯ್ದೆ ಅನ್ವಯ ಕ್ರಯಪತ್ರ ಮಾದರಿಯನ್ನು ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

ಬಿಲ್ಡರ್ ಗಳು ಮತ್ತು ಗೃಹ ಮಾರಾಟಗಾರರು ತಮಗೆ ಇಷ್ಟಬಂದಂತೆ ಕ್ರಯಪತ್ರವನ್ನು ಸಿದ್ಧಮಾಡಿಕೊಳ್ಳುತ್ತಿದ್ದರು. ಇನ್ನು ಮುಂದೆ ಇದಕ್ಕೆ ಕಡಿವಾಣ ಬೀಳಲಿದ್ದು ರಾಜ್ಯಾದ್ಯಂತ ಒಂದೇ ರೂಪದಲ್ಲಿ ಕ್ರಯಪತ್ರ ಇರುತ್ತದೆ.

ಇದರಿಂದ ಮನೆ, ಫ್ಲಾಟ್ ಖರೀದಿಸುವವರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿ ರೇರಾ ಕಾಯ್ದೆ ಜಾರಿಗೆ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಹೇಳಲಾಗಿದೆ. ಕಳೆದ ವಾರವಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...