ನವದೆಹಲಿ: ಗ್ರಾಹಕ ಬೆಲೆ ಸೂಚ್ಯಂಕ(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಈ ವರ್ಷದ ಅಕ್ಟೋಬರ್ ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇ. 6.77 ಕ್ಕೆ ಇಳಿದಿದೆ.
ಇಂದು ಬಿಡುಗಡೆಯಾದ ಅಂಕಿಅಂಶಗಳು ಮತ್ತು ಕಾರ್ಯಕ್ರಮ ಅನುಷ್ಠಾನದ ದತ್ತಾಂಶ ಸಚಿವಾಲಯದ ಪ್ರಕಾರ, ಚಿಲ್ಲರೆ ಹಣದುಬ್ಬರವು ಮುಖ್ಯವಾಗಿ ಆಹಾರ ಮತ್ತು ಪಾನೀಯಗಳ ಬೆಲೆಯಲ್ಲಿ ಕಡಿಮೆಯಾಗಿದೆ. ಸೆಪ್ಟೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರವು ಶೇಕಡ 7.41 ರಷ್ಟಿತ್ತು.