ನವದೆಹಲಿ: ಕೊರೊನಾ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸುಮಾರು 5 ದೊಡ್ಡ ಬ್ಯಾಂಕುಗಳು ತಮ್ಮ ಬಂಡವಾಳ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ಷೇರು ಮಾರಾಟಕ್ಕೆ ಚಿಂತನೆ ನಡೆಸಿವೆ ಎಂದು ಹೇಳಲಾಗಿದೆ.
ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ 5 ದೊಡ್ಡ ಬ್ಯಾಂಕ್ ಗಳು ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಸಾಂಸ್ಥಿಕ ಹೂಡಿಕೆದಾರರಿಗೆ ಷೇರುಗಳನ್ನು ಮಾರಾಟ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.
ವಸೂಲಾಗದ ಸಾಲದ ಪ್ರಮಾಣ, ಸಾಲ ಮರು ಹೊಂದಾಣಿಕೆ ಮತ್ತು ರೇಟಿಂಗ್ಸ್ ಕುರಿತಾದ ಮಾಹಿತಿ ಅಕ್ಟೋಬರ್ ಅಂತ್ಯದ ವೇಳೆಗೆ ಸಿಗಲಿದ್ದು, ನಂತರ ಬಂಡವಾಳ ಸಂಗ್ರಹಕ್ಕೆ ಒತ್ತು ನೀಡಲಾಗುವುದು. ಸಾಂಸ್ಥಿಕ ಹೂಡಿಕೆದಾರರಿಗೆ ಷೇರು ಮಾರಾಟ ಮಾಡಲಾಗುವುದು ಎಂದು ಹೇಳಲಾಗಿದೆ.