ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ ದರ ಶೇಕಡ 10 ರಷ್ಟು ತುಟ್ಟಿಯಾಗಿದೆ.
ಕಳೆದ 5 ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿ ದರ ಶೇಕಡ 10 ರಷ್ಟು ಹೆಚ್ಚಳವಾಗಿದೆ. ಬಾಂಗ್ಲಾದೇಶ ಅಕ್ಕಿ ಮೇಲಿನ ಆಮದು ಸುಂಕವನ್ನು ಶೇಕಡ 65.52ರಿಂದ ಶೇಕಡ 25 ಇಳಿಕೆ ಮಾಡಿದೆ. ಇದರ ಬೆನ್ನಲ್ಲೇ ಭಾರತದಲ್ಲಿ ಅಕ್ಕಿ ದರ ತೀವ್ರ ಏರಿಕೆ ಕಂಡುಬಂದಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಭಾರತದ ಬಾಸ್ಮತಿಯೇತರ ಅಕ್ಕಿ ದರ ಪ್ರತಿ ಟನ್ ಗೆ 350 ಡಾಲರ್ ಗೆ ಏರಿಕೆಯಾಗಿದೆ. ಬಾಂಗ್ಲಾದೇಶಕ್ಕೆ ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಬಿಹಾರದಿಂದ ಅಕ್ಕಿ ರವಾನೆ ಆಗುತ್ತದೆ. ಈ ಮೂರು ರಾಜ್ಯಗಳಲ್ಲಿ ಅಕ್ಕಿ ದರ ಶೇಕಡ 20ರಷ್ಟು ಏರಿಕೆಯಾಗಿದೆ.
ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್, ತರಕಾರಿ, ದಿನಸಿ ದರ ಏರಿಕೆಯಿಂದ ಮೊದಲೇ ತತ್ತರಿಸಿದ ಜನಸಾಮಾನ್ಯರಿಗೆ ಅಕ್ಕಿ ದರ ಏರಿಕೆಯಾಗಿರುವುದು ನುಂಗಲಾರದ ತುತ್ತಾಗಿದೆ.