alex Certify BIG NEWS: 2025 ಅಕ್ಟೋಬರ್ ನಿಂದ ಟ್ರಕ್ ಗಳಿಗೆ AC ಕ್ಯಾಬಿನ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2025 ಅಕ್ಟೋಬರ್ ನಿಂದ ಟ್ರಕ್ ಗಳಿಗೆ AC ಕ್ಯಾಬಿನ್ ಕಡ್ಡಾಯ

ನವದೆಹಲಿ: ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ ಗಳು ಚಾಲಕರಿಗೆ ಎಸಿ(ಹವಾನಿಯಂತ್ರಿತ) ಕ್ಯಾಬಿನ್‌ ಗಳನ್ನು ಹೊಂದಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೇಳಿದೆ.

ಅಧಿಸೂಚನೆಯಲ್ಲಿ, ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಿಸಿದ ವಾಹನಗಳು, N2 ಮತ್ತು N3 ವರ್ಗದ ವಾಹನಗಳ ಕ್ಯಾಬಿನ್‌ಗೆ ಹವಾನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಸಚಿವಾಲಯವು ಹೇಳಿದೆ.

ಹವಾನಿಯಂತ್ರಣ ವ್ಯವಸ್ಥೆಯೊಂದಿಗೆ ಅಳವಡಿಸಲಾಗಿರುವ ಕ್ಯಾಬಿನ್‌ನ ಪರೀಕ್ಷೆಯು IS14618:2022 ರ ಪ್ರಕಾರ ಇರಬೇಕು ಎಂದು ಅಧಿಸೂಚನೆಯಲ್ಲಿ ಸೇರಿಸಲಾಗಿದೆ.

ಜುಲೈನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಟ್ರಕ್‌ ಗಳ ಕ್ಯಾಬಿನ್‌ ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ಅನುಮೋದಿಸಲಾಗಿದೆ ಎಂದು ಹೇಳಿದ್ದರು.

ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ಸಾರಿಗೆ ಕ್ಷೇತ್ರದಲ್ಲಿ ಟ್ರಕ್ ಚಾಲಕರು ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಅವರ ಕೆಲಸದ ಪರಿಸ್ಥಿತಿಗಳು ಮತ್ತು ಮನಸ್ಸಿನ ಸ್ಥಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಅವಶ್ಯಕತೆಯಿದೆ. ಟ್ರಕ್‌ ಗಳಿಗೆ ಹವಾನಿಯಂತ್ರಿತ ಕ್ಯಾಬಿನ್‌ ಗಳನ್ನು ಶೀಘ್ರದಲ್ಲೇ ಕಡ್ಡಾಯಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಟ್ರಕ್ ಚಾಲಕರು ತೀವ್ರತರವಾದ ಶಾಖದ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಾರೆ. ಕೆಲವರು ವೆಚ್ಚವನ್ನು ಹೆಚ್ಚಿಸುತ್ತದೆ ಎಂದು ಆಕ್ಷೇಪಿಸಿದರೂ ಸಹ, ಟ್ರಕ್ ಚಾಲಕರಿಗೆ ಹವಾನಿಯಂತ್ರಿತ ಕ್ಯಾಬಿನ್‌ಗಳನ್ನು ಅಳವಡಿಸುವ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...