ನವದೆಹಲಿ: 2019 -20 ನೇ ಸಾಲಿನಲ್ಲಿ ಒಂದೇ ಒಂದು ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಮುದ್ರಿಸಿಲ್ಲವೆಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
2018ರ ಮಾರ್ಚ್ ಅಂತ್ಯದ ವೇಳೆಗೆ 2000 ರೂಪಾಯಿ ನೋಟಿನ ಚಲಾವಣೆ 33, 632 ಲಕ್ಷ ಇತ್ತು. 2019ರ ಮಾರ್ಚ್ ಅಂತ್ಯದ ವೇಳೆಗೆ 32,910 ಲಕ್ಷಕ್ಕೆ ಇಳಿದಿತ್ತು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ವಾರ್ಷಿಕ ವರದಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ್ದು 2020 ರ ಮಾರ್ಚ್ ಅಂತ್ಯದ ವೇಳೆಗೆ 2000 ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆ 27,398 ಲಕ್ಷಕ್ಕೆ ಇಳಿದಿದೆ ಎಂದು ಹೇಳಲಾಗಿದೆ.
500 ರೂಪಾಯಿ ಮತ್ತು 200 ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆ ಹೆಚ್ಚಾಗಿದೆ. 2019 -20 ನೇ ವರ್ಷದಲ್ಲಿ ಒಂದೇ ಒಂದು ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಮುದ್ರಿಸಿಲ್ಲ ಎಂದು ಹೇಳಲಾಗಿದೆ.