alex Certify ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್: DL ಸೇರಿ RTO ಸೇವೆ ಆನ್ಲೈನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್: DL ಸೇರಿ RTO ಸೇವೆ ಆನ್ಲೈನ್

ಶಿವಮೊಗ್ಗ: ಸಾಗರ ಪ್ರಾದೇಶಿಕ ಸಾರಿಗೆ ಕಚೇರಿ(RTO)ಯಲ್ಲಿ ಇನ್ನು ಮುಂದೆ ಕಲಿಕಾ ಚಾಲನಾ ಅನುಜ್ಞಾ ಪತ್ರ (DL) ಹಾಗೂ ಚಾಲನ ಅನುಜ್ಞಾಪತ್ರ ನವೀಕರಣ (Renewal), ಚಾಲನಾ ಅನುಜ್ಞಾಪತ್ರ ನಕಲು (Duplicate), ಚಾಲನಾ ಅನುಜ್ಞಾಪತ್ರ ವಿಳಾಸ ಬದಲಾವಣೆ (Address Change), ಹೆಸರು ಬದಲಾವಣೆ (Name Change)  ಇವುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಂಪರ್ಕರಹಿತ(Contact less Service)  ಸೇವೆಗಳನ್ನು ಜಾರಿಗೆ ತರಲಾಗಿದೆ.

ಸಾರ್ವಜನಿಕರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯಲ್ಲಿ ಮೇಲ್ಕಂಡ ಯಾವ ಸೇವೆಗೂ ನಗದು ಶುಲ್ಕ ಹಾಗೂ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ, ಆದ್ದರಿಂದ ಕಚೇರಿಗೆ ಹಾಜರಾಗುವ ಅವಶ್ಯಕತೆ ಇರುವುದಿಲ್ಲ. ಈ ಸೇವೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...