ಬೆಂಗಳೂರು: ಶ್ರೀಗಂಧ ನೀತಿ -2022 ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದಾಗಿದೆ ಎಂದು ಸಂಪುಟ ಸಭೆಯ ನಂತರ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡಬಹುದು. ಜಾಗತಿಕ ಮಟ್ಟದಲ್ಲಿ ಶ್ರೀಗಂಧಕ್ಕೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಶ್ರೀಗಂಧ ನೀತಿ ಸರಳೀಕರಣ ಮಾಡಲಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶ್ರೀಗಂಧ ಬೆಳೆಯುವ ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ರೈತರು ಬೆಳೆಯುವ ಶ್ರೀಗಂಧಕ್ಕೆ ರಕ್ಷಣೆ ಒದಗಿಸಲಾಗುವುದು. ಪ್ರಸ್ತುತ ದಿನಗಳಲ್ಲಿ ಶ್ರೀಗಂಧ ಲಭ್ಯತೆಯ ಕೊರತೆ ಇದೆ. ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಶ್ರೀಗಂಧ ಬೇಕಾಗಿದೆ. ಹೀಗಾಗಿ ಶ್ರೀಗಂಧ ಮಾರಾಟಕ್ಕೆ ಇದ್ದ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸಂಪುಟ ಸಭೆಯ ನಂತರ ಸುಧಾಕರ್ ಮಾಹಿತಿ ನೀಡಿದ್ದಾರೆ.