ಹೈದರಾಬಾದ್ : ಪುಷ್ಪ-2 ಚಿತ್ರ ವೀಕ್ಷಣೆ ವೇಳೆ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಣೆ ಮಾಡಲಾಗಿದೆ.
ಮೃತಪಟ್ಟ ರೇವತಿ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡಲಾಗುತ್ತಿದೆ ಎಂದು ಅಲ್ಲು ಅರ್ಜನ್ ತಂದೆ ಅಲ್ಲು ಅರವಿಂದ್ ಹೇಳಿದ್ದಾರೆ . ಅಲ್ಲು ಅರ್ಜುನ್ ಪರವಾಗಿ 1 ಕೋಟಿ, ಪುಷ್ಪ 2 ನಿರ್ಮಾಪಕರು ಮತ್ತು ನಿರ್ದೇಶಕ ಸುಕುಮಾರ್ 50 ಲಕ್ಷ ರೂ ನೀಡುತ್ತಿದ್ದಾರೆ ಎಂದಿದ್ದಾರೆ.
ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ಅಲ್ಲು ಅರ್ಜುನ್ ಅವರ ಅಭಿಮಾನಿ ರೇವತಿ ಮೃತಪಟ್ಟಿದ್ದರು. ಆಕೆಯ ಮಗ ಶ್ರೀಜಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಬಂಧನಕ್ಕೀಡಾಗಿ ಜಾಮೀನು ಮೇಲೆ ಬಿಡಿಗಡೆಯಾಗಿದ್ದರು. ಮಹಿಳಾ ಅಭಿಮಾನಿ ಸಾವು ಘಟನೆ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ 25 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದರು. ಆದರೆ ಕೇವಲ ಘೋಷಣೆ ಮಾತ್ರ ಮಾಡಿದ್ದಾರೆ ಪರಿಹಾರ ನೀಡಿಲ್ಲ ಎಂಬ ಆರೋಪ ಕೂಡ ಕೇಳಿಬಂದಿತ್ತು. ಈ ಘಟನೆಗಳ ಬೆನ್ನಲ್ಲೇ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್ ಮೃತ ರೇವತಿ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.