alex Certify ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: 5,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ SBI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: 5,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ SBI

ದೇಶದ ಪ್ರತಿಷ್ಟಿತ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 17ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಕ್ಲರಿಕಲ್​ ವಿಭಾಗದಲ್ಲಿ ಜ್ಯೂನಿಯರ್​ ಅಸೋಸಿಯೇಟ್​ ಹುದ್ದೆಗೆ ಅರ್ಹ ಭಾರತೀಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯಾವುದಾದರೂ ಒಂದು ರಾಜ್ಯದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಗಳು ಒಮ್ಮೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದಾಗಿದೆ ಎಂದು ಎಸ್​ಬಿಐ ಹೇಳಿದೆ.

5000 ಸಾಮಾನ್ಯ ಹುದ್ದೆಗಳು ಹಾಗೂ 237 ಬ್ಯಾಕ್​ಲಾಗ್​ ಹುದ್ದೆಗಳನ್ನ ಭರ್ತಿ ಮಾಡುವ ಇರಾದೆಯನ್ನ ಎಸ್​ಬಿಐ ಹೊಂದಿದೆ. ಎರಡು ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಪ್ರಾಥಮಿಕ ಹಾಗೂ ಮುಖ್ಯ ಮತ್ತು ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾಥಮಿಕ ಪರೀಕ್ಷೆಯನ್ನ ಸದ್ಯಕ್ಕೆ ಜೂನ್​​ ತಿಂಗಳಲ್ಲಿ ನಿಗದಿಪಡಿಸಲಾಗಿದೆ. ಏಪ್ರಿಲ್​ 1ನೇ ತಾರೀಖಿಗೆ ಅನ್ವಯವಾಗುವಂತೆ 20 ರಿಂದ 28 ವರ್ಷ ಮೇಲ್ಪಟ್ಟವರು ಈ ಹುದ್ದೆಗೆ ಅರ್ಹರಾಗಿದ್ದಾರೆ.

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಮಾನ ಅರ್ಹತೆ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. 16-08-2021ರ ಒಳಗಾಗಿ ಐಡಿಡಿ ಪ್ರಮಾಣಪತ್ರ ಹೊಂದಿದವರು ಈ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಎಸ್​ಬಿಐ ಹೇಳಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 6 ತಿಂಗಳು ಪ್ರೊಬೆಷನರಿ ಅವಧಿ ಇರಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...