ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊರೊನಾ ಸಂಕಷ್ಟದ ನಡುವೆಯೂ ಶುಭಸುದ್ದಿ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಜಾರಿಗೊಳಿಸಲಾಗುತ್ತಿರುವ ಸ್ವಯಂ ನಿವೃತ್ತಿ ಯೋಜನೆ ವೆಚ್ಚ ಕಡಿತದ ಭಾಗವಾಗಿರುವುದಿಲ್ಲ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗ ಸ್ನೇಹಿಯಾಗಿದ್ದು, ಈ ವರ್ಷ 14 ಸಾವಿರಕ್ಕೂ ಹೆಚ್ಚು ಮಂದಿಯನ್ನು ನೇಮಿಸಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2.5 ಲಕ್ಷ ಉದ್ಯೋಗಿಗಳನ್ನು ಒಳಗೊಂಡಿದ್ದು, ಈ ವರ್ಷ 14000 ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಲಾಗಿದೆ.