ನವದೆಹಲಿ: 15 ವರ್ಷಕ್ಕಿಂತ ಹಳೆಯ ವಾಹನಗಳ ಗುಜರಿ ನೀತಿ ಅನ್ವಯ ಏಪ್ರಿಲ್ 1 ರಿಂದ 9 ಲಕ್ಷ ಸರ್ಕಾರಿ ವಾಹನಗಳು ಗುಜರಿ ಸೇರಲಿve. ಅವುಗಳ ಬದಲಿಗೆ ಹೊಸ ವಾಹನ ಬಳಕೆ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಎಫ್ಐಸಿಸಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ನಿತಿನ್ ಗಡ್ಕರಿ, ಮಾಲಿನ್ಯಕ್ಕೆ ಕಡಿವಾಣ ಹಾಕಲು 15 ವರ್ಷಕ್ಕಿಂತ ಹೆಚ್ಚು ಹಳೆಯ ವಾಹನಗಳನ್ನು ಗುಜರಿಗೆ ಹಾಕಲಾಗುವುದು. ಏಪ್ರಿಲ್ 1 ರಿಂದ 9 ಲಕ್ಷ ಸರ್ಕಾರಿ ವಾಹನಗಳು ಗುಜರಿ ಸೇರಲಿದ್ದು, ಹೊಸ ವಾಹನ ಬಳಕೆ ಆರಂಭಿಸಲಾಗುವುದು. ಇದರಿಂದ ವಾಯು ಮಾಲಿನ್ಯ ಕಡಿಮೆ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.