ನವದೆಹಲಿ: ಹೊಸ ಗುಜರಿ ನೀತಿ ಅನ್ವಯ ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಮಾಲೀಕರಿಗೆ ತೆರಿಗೆ ವಿನಾಯಿತಿ ನೀಡಲಾಗುವುದು.
ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬಗ್ಗೆ ಮಾಹಿತಿ ನೀಡಿದ್ದು, ಗುಜರಿ ನೀತಿ ಅನ್ವಯ ಹಳೆ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವ ಮಾಲೀಕರಿಗೆ ವೈಯಕ್ತಿಕ ವಾಹನಗಳ ರಸ್ತೆ ತೆರಿಗೆಯಲ್ಲಿ ಶೇಕಡ 25 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ವಾಣಿಜ್ಯ ಉದ್ದೇಶದ ವಾಹನಗಳಿಗೆ ಶೇಕಡ 15 ರವರೆಗೆ ವಿನಾಯಿತಿ ನೀಡಲು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಸ್ತೆ ತೆರಿಗೆಯಲ್ಲಿ ವಿನಾಯಿತಿ ನೀಡುವಂತೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ತರಲಾಗುವುದು. ರಾಷ್ಟ್ರೀಯ ಆಟೋಮೊಬೈಲ್ ಜಾರಿಯಾದ ನಂತರ ರಾಜ್ಯಗಳ ಆದಾಯ ಹೆಚ್ಚಲಿದೆ ಎಂದು ಹೇಳಲಾಗಿದೆ.