ಬೆಂಗಳೂರು: ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಸೀಟ್ ಬೆಲ್ಟ್ ಕಡ್ಡಾಯಗೊಳಿಸಿದ ಪೊಲೀಸ್ ಇಲಾಖೆ ದಂಡದ ಮೊತ್ತವನ್ನು ಹೆಚ್ಚಳ ಮಾಡಿದೆ.
500 ರೂ. ಇದ್ದ ದಂಡದ ಮೊತ್ತವನ್ನು 1 ಸಾವಿರ ರೂಪಾಯಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸೀಟ್ ಬೆಲ್ಟ್ ಧರಿಸದವರಿಗೆ 1000 ರೂ. ದಂಡ ವಿಧಿಸಲು ಆದೇಶಿಸಲಾಗಿದೆ.
ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದ ಸೂಚನೆಯ ಮೇರೆಗೆ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಕಮಿಷನರೇಟ್ ಮತ್ತು ಪೊಲೀಸ್ ಅಧೀಕ್ಷಕರುಗಳಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಇದುವರೆಗೆ ಸೀಟ್ ಬೆಲ್ಟ್ ಧರಿಸದವರಿಗೆ 500 ರೂ. ದಂಡ ವಿಧಿಸಲಾಗುತ್ತಿತ್ತು. ಅದನ್ನು 1 ಸಾವಿರ ರೂ.ಗೆ ಹೆಚ್ಚಿಸಲಾಗಿದೆ.
ಖಾಸಗಿ ಕಾರ್, ಪ್ರವಾಸಿ ಕಾರ್ ಗಳಲ್ಲಿ ಸೀಟ್ ಬೆಲ್ಟ್ ಕಡ್ಡಾಯವಾಗಿದೆ. ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೊಸ ಆದೇಶ ಹೊರಡಿಸಲಾಗಿದೆ. ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಂಡದ ಪ್ರಮಾಣ ಹೆಚ್ಚಳ ಮಾಡಲಾಗಿದೆ. ಅಪಘಾತದಿಂದ ಸಾವು ನೋವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.