alex Certify ಬ್ಯಾಂಕ್ ಖಾತೆ ಹೊಂದಿದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಖಾತೆ ಹೊಂದಿದ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

ಮುಂಬೈ: ಹಿರಿಯ ನಾಗರಿಕರಿಗೆ ತಮ್ಮ ಮನೆ ಬಾಗಿಲಲ್ಲೇ ಬ್ಯಾಂಕಿಂಗ್ ಸೇವೆ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಬ್ಯಾಂಕುಗಳಿಗೆ ಸಲಹೆ ನೀಡಲಾಗಿದ್ದು 70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅವರ ಮನೆ ಬಾಗಿಲಲ್ಲೇ ಬ್ಯಾಂಕಿಂಗ್ ಸೇವೆ ಒದಗಿಸುವಂತೆ ತಿಳಿಸಲಾಗಿದೆ.

ನಗದು, ಚೆಕ್, ಡಿಡಿ ಮೊದಲಾದ ಸೇವೆಗಳನ್ನು ಹಿರಿಯ ನಾಗರಿಕರಿಗಾಗಿ ಮನೆಬಾಗಿಲಿಗೆ ತಲುಪಿಸಬೇಕು. ಅವರ ವೈದ್ಯಕೀಯ ಸೇವೆ, ಔಷಧ, ತುರ್ತು ಅಗತ್ಯಗಳಿಗೆ ಅನುಕೂಲವಾಗುವಂತೆ ಬ್ಯಾಂಕ್ ಸೇವೆ ನೀಡಬೇಕು ಎಂದು ಹೇಳಲಾಗಿದೆ.

ದಿನಕ್ಕೆ ಕನಿಷ್ಠ ಒಂದು ಸಾವಿರ ರೂಪಾಯಿಯಿಂದ ಗರಿಷ್ಠ 20 ಸಾವಿರ ರೂಪಾಯಿವರೆಗೂ ಪಡೆದುಕೊಳ್ಳಲು ಅವಕಾಶವಿದೆ. ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಹಿರಿಯ ನಾಗರಿಕರು ಮತ್ತು ದಿವ್ಯಾಂಗರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು ಟೋಲ್ ಫ್ರೀ ನಂಬರ್ (1800111103) ತೆರೆಯಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...