alex Certify BREAKING NEWS: ತಡರಾತ್ರಿ ಮಹತ್ವದ ನಿರ್ಧಾರ, RBI ಗವರ್ನರ್ ಶಕ್ತಿಕಾಂತ್ ದಾಸ್ ಮತ್ತೆ 3 ವರ್ಷಕ್ಕೆ ಮರು ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಡರಾತ್ರಿ ಮಹತ್ವದ ನಿರ್ಧಾರ, RBI ಗವರ್ನರ್ ಶಕ್ತಿಕಾಂತ್ ದಾಸ್ ಮತ್ತೆ 3 ವರ್ಷಕ್ಕೆ ಮರು ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ಮರು ನೇಮಕ ಮಾಡಲಾಗಿದೆ. ಕೇಂದ್ರ ಸಂಪುಟದ ನೇಮಕಾತಿ ಸಮಿತಿಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

2021 ರ ಡಿಸೆಂಬರ್ 10 ರಿಂದ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಶಕ್ತಿಕಾಂತ ದಾಸ್ ಅವರು ಆರ್.ಬಿ.ಐ. ಗವರ್ನರ್ ಆಗಿ ಮುಂದುವರೆಯಲಿದ್ದಾರೆ.

ಶಕ್ತಿಕಾಂತ ದಾಸ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಗವರ್ನರ್ ಆಗಿ ಸರ್ಕಾರ ಮತ್ತೆ ಮೂರು ವರ್ಷಗಳ ಕಾಲ ನೇಮಕ ಮಾಡಿದೆ. 10.12.2021 ರ ನಂತರ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅದು ಶಕ್ತಿಕಾಂತ ದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಮರುನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಗುರುವಾರ ತಡರಾತ್ರಿ ನಡೆದ ಸಂಪುಟದ ನೇಮಕಾತಿ ಸಮಿತಿ ಈ ನಿರ್ಧಾರಕ್ಕೆ ಅನುಮೋದನೆ ನೀಡಿದೆ. ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು ಮತ್ತು ಡಿಸೆಂಬರ್ 11, 2018 ರಂದು ಮೂರು ವರ್ಷಗಳ ಅವಧಿಗೆ RBI ಮುಖ್ಯಸ್ಥರಾಗಿ ನೇಮಕಗೊಂಡರು.

ಶಕ್ತಿಕಾಂತ ದಾಸ್ ಅವರು ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಹಣಕಾಸು, ತೆರಿಗೆ, ಕೈಗಾರಿಕೆಗಳು, ಮೂಲಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದಾರೆ.

ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಅವರ ಸುದೀರ್ಘ ಅಧಿಕಾರಾವಧಿಯಲ್ಲಿ, ಅವರು 8 ಕೇಂದ್ರ ಬಜೆಟ್‌ಗಳ ತಯಾರಿಕೆಯಲ್ಲಿ ನೇರವಾಗಿ ಸಂಬಂಧ ಹೊಂದಿದ್ದರು. ದಾಸ್ ಅವರು ವಿಶ್ವ ಬ್ಯಾಂಕ್, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್(ಎಡಿಬಿ), ನ್ಯೂ ಡೆವಲಪ್‌ಮೆಂಟ್ ಬ್ಯಾಂಕ್(ಎನ್‌ಡಿಬಿ) ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್(ಎಐಐಬಿ) ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು IMF, G20, BRICS, SAARC ಮುಂತಾದ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...