ಕಾರವಾರ: ಹೊರಗುತ್ತಿಗೆ ಕಾರ್ಮಿಕರ ಹಿತಕಾಯಲು ಹೊಸ ಕಾಯ್ದೆ ರೂಪಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗುತ್ತಿಗೆ ಕಾರ್ಮಿಕರ ಕಾಯ್ದೆ ಜಾರಿಯಾದ ನಂತರ ಉದ್ಯೋಗದಾತರು ಕಾರ್ಮಿಕರ ಭವಿಷ್ಯ ನಿಧಿ ಪಾವತಿಸಿದ ದಾಖಲೆಯನ್ನು ಪ್ರತಿ ತಿಂಗಳು 30ನೇ ತಾರೀಕಿನಂದು ಕಾರ್ಮಿಕ ಇಲಾಖೆಗೆ ಕಡ್ಡಾಯವಾಗಿ ತಲುಪಿಸಬೇಕು ಎಂದು ಹೇಳಿದ್ದಾರೆ.
ಹೊರಗುತ್ತಿಗೆ ನೌಕರರ ಶೋಷಣೆ ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಹಲವು ಸಂಸ್ಥೆಗಳು ಮತ್ತು ಏಜೆನ್ಸಿಗಳು ಕಾರ್ಮಿಕರ ಭವಿಷ್ಯ ನಿಧಿ ಪಾವತಿಸುತ್ತಿಲ್ಲ. ಸರಿಯಾಗಿ ವೇತನ ನೀಡುತ್ತಿಲ್ಲ. ಇದರ ಬಗ್ಗೆ ಪ್ರಶ್ನಿಸಿದಾಗ ಕೆಲಸದಿಂದ ತೆಗೆದು ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ಹೊಸ ಕಾಯ್ದೆ ರೂಪಿಸಲು ಕ್ರಮಕೈಗೊಂಡಿದೆ. ಕಾರ್ಮಿಕರಿಗೆ ಪಿಎಫ್, ಪಿಎಸ್ಐ, ವೇತನ ಪಾವತಿಸಬೇಕಿದೆ. ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.