ನವದೆಹಲಿ: ಕೃಷಿ ಯಂತ್ರೋಪಕರಣ ಖರೀದಿಸುವ ರೈತರಿಗೆ ಉತ್ತೇಜನವಾಗಿ ನೀಡುವ ಸಹಾಯಧನ ಸೌಲಭ್ಯದ ಕುರಿತು ಸಮರ್ಪಕ ಮಾಹಿತಿ ನೀಡಬೇಕು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಕೃಷಿ ಯಂತ್ರೋಪಕರಣಗಳ ಉತ್ಪಾದನಾ ಕಂಪನಿಗಳು, ಮಾರಾಟ ಮಾಡುವ ಡೀಲರ್ ಗಳು, ರಾಜ್ಯ ಸರ್ಕಾರದ ಕೃಷಿ ಇಲಾಖೆಗಳು ಅಧಿಕೃತ ವೆಬ್ಸೈಟ್ ಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರಕಟಿಸಬೇಕೆಂದು ತಿಳಿಸಲಾಗಿದೆ.
ಟ್ರ್ಯಾಕ್ಟರ್, ಟಿಲ್ಲರ್ ಸೇರಿದಂತೆ ಕೃಷಿ ಯಂತ್ರೋಪಕರಣ ಮಾರಾಟಮಾಡುವ ಡೀಲರುಗಳು ರೈತರು ಖರೀದಿ ಮಾಡುವ ಪ್ರತಿ ಸಲಕರಣೆಗಳ ಗರಿಷ್ಠ ಮಾರಾಟ ದರ –ಎಂ.ಆರ್.ಪಿ.ಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.
ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಈ ಬಗ್ಗೆ ಮಾಹಿತಿ ನೀಡಿ, ಹೆಚ್ಚಿನ ದರ ಪ್ರಕಟಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲಾಗಿದೆ ಕೃಷಿ ಯಂತ್ರೋಪಕರಣ ಸಲಕರಣೆಗಳ ಎಂ.ಆರ್.ಪಿ.ಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಹೇಳಿದ್ದಾರೆ.