alex Certify ರಾಜ್ಯದ ಜನತೆಗೆ ಮತ್ತೊಂದು ‘ಶಾಕಿಂಗ್’ ನ್ಯೂಸ್: ವಿದ್ಯುತ್ ಗ್ರಾಹಕರಿಗೆ ದರ ಹೆಚ್ಚಳ ಬರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ‘ಶಾಕಿಂಗ್’ ನ್ಯೂಸ್: ವಿದ್ಯುತ್ ಗ್ರಾಹಕರಿಗೆ ದರ ಹೆಚ್ಚಳ ಬರೆ

ಬೆಂಗಳೂರು: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನವೆಂಬರ್ 1 ರಿಂದ ಅನ್ವಯವಾಗುವಂತೆ ವಿದ್ಯುತ್ ದರವನ್ನು ಯುನಿಟ್ ಗೆ 40 ಪೈಸೆಯಷ್ಟು ಹೆಚ್ಚಳ ಮಾಡಿದೆ.

ಈಗ ಇಂಧನ ವೆಚ್ಚ ಹೆಚ್ಚಳ ಹೊಂದಾಣಿಕೆ ಶುಲ್ಕದ ಹೆಸರಿನಲ್ಲಿ 5 ರಿಂದ 8 ಪೈಸೆಯವರೆಗೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ಏಪ್ರಿಲ್ 1 ರಿಂದ ಮತ್ತೆ ದರ ಏರಿಕೆಗೆ ಸಿದ್ಧತೆ ನಡೆಸಲಾಗಿದೆ.

ಈ ಮೂಲಕ ವಿದ್ಯುತ್ ಗ್ರಾಹಕರಿಗೆ ಶಾಕ್ ಮೇಲೆ ಶಾಕ್ ನೀಡಲು ಮುಂದಾಗಿದೆ. ಮುಂದಿನ ಮೂರು ತಿಂಗಳಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಳ ಮಾಡಲು ಸಿದ್ಧತೆ ನಡೆಸಲಾಗಿದ್ದು, ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಎಷ್ಟು ದರ ಏರಿಕೆ ಮಾಡಬೇಕು ಎಂಬುದರ ಕುರಿತು ಪ್ರಸ್ತಾವನೆ ಸಲ್ಲಿಸಲು ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...