ಕೆನಡಾ: ವಿಶ್ವಾದ್ಯಂತ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಭಾರತದಲ್ಲಿ ಒಂದೇ ದಿನ 3.32 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಭಾರತದ ವಿಮಾನಗಳಿಗೆ ಕೆನಡಾ ಸರ್ಕಾರ ನಿರ್ಬಂಧ ಹೇರಿದೆ.
ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳ ವಿಮಾನಗಳ ಮೇಲೆ 30 ದಿನಗಳ ಕಾಲ ಕೆನಡಾ ನಿರ್ಬಂಧ ವಿಧಿಸಿದೆ.
ಜುಲೈ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ ಓಲಾ ಇ ಸ್ಕೂಟರ್
ಈ ಕುರಿತು ಕೆನಡಾ ಸಾರಿಗೆ ಸಚಿವ ಓಮರ್ ಅಲ್ಛಾಬ್ರಾ ಮಾಹಿತಿ ನೀಡಿದ್ದು, ಭಾರತ ಹಾಗೂ ಪಾಕಿಸ್ತಾನದಿಂದ ಬರುವ ಎಲ್ಲಾ ವಿಮಾನಗಳನ್ನು ಒಂದು ತಿಂಗಳ ಕಾಲ ನಿಷೇಧಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ನಿರ್ಬಂಧ ಸರಕು ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.