alex Certify ಮೀನುಗಾರರು, ಹಾಲು ಉತ್ಪಾದಕರು, ರೈತರಿಗೆ ಸಿಎಂ BSY ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರರು, ಹಾಲು ಉತ್ಪಾದಕರು, ರೈತರಿಗೆ ಸಿಎಂ BSY ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮೀನುಗಾರರು ಮತ್ತು ಪಶುಪಾಲಕರಿಗೆ ವಿಸ್ತರಿಸಿದ್ದು, ಇದನ್ನು ಬಳಸಿಕೊಂಡು ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಕಚೇರಿ ಕೃಷ್ಣಾದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯ ಇಲಾಖೆ ಸಭೆ ನಡೆಸಿದ ಸಿಎಂ, ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಸಕಾಲದಲ್ಲಿ ಧನಸಹಾಯ ಒದಗಿಸಲಾಗುವುದು. ಯೋಜನೆಗೆ ಮೀನುಗಾರರು ಮತ್ತು ಪಶುಪಾಲಕರನ್ನು ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಪಶುಪಾಲನಾ ಚಟುವಟಿಕೆಗಳಿಗೆ 1 ಲಕ್ಷದಿಂದ 3 ಲಕ್ಷ ರೂಪಾಯಿವರೆಗೆ ಬಡ್ಡಿರಹಿತವಾಗಿ ಮುಂಗಡ ಸಾಲ ಪಡೆಯಬಹುದಾಗಿದ್ದು ರೈತರು ಸದ್ಬಳಕೆ ಮಾಡಿಕೊಳ್ಳಲು ಇಲಾಖೆ ವತಿಯಿಂದ ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...