ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಫೈನಾನ್ಸ್ ಸಿಬ್ಬಂದಿ ಕಿರುಕುಳ ನೀಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರಿಗಾದರೂ ಕಿರುಕುಳ ನೀಡಿದಲ್ಲಿ ದೂರು ನೀಡಿದರೆ ಅಂತವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ ಎಂದು ಹೇಳಿದರು.
ಫೈನಾನ್ಸ್ ನವರ ಕಿರುಕುಳ ತಪ್ಪಿಸಲು ಹಾಗೂ ಈ ನಿಟ್ಟಿನಲ್ಲಿ ತೊಂದರೆಯಾದವರು ದೂರು ನೀಡಲು ಸಹಾಯವಾಣಿ ತೆರೆಯುತ್ತಿದೇವೆ. ಮೈಕ್ರೋ ಫೈನಾನ್ಸ್ ನವರಿಂದ ಯಾರಿಗಾದರೂ ತೊಂದರೆ, ಕಿರುಕುಳ ಆದಲ್ಲಿ ದೂರು ಕೊಟ್ಟರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.