ನವದೆಹಲಿ: ವಿಶ್ವ ಪರಿಸರ ದಿನಾಚರಣೆ ಮುನ್ನಾದಿನ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ದೇಶವನ್ನು ಏಕ ಬಳಕೆ ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸಲು ವಿವಿಧ ಚಟುವಟಿಕೆ ಕೈಗೊಳ್ಳುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಆದೇಶ ಜಾರಿಗೆ ಒತ್ತು ನೀಡಬೇಕೆಂದು ಹೇಳಲಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ಸಚಿವಾಲಯದ ಸೂಚನೆಯ ಪ್ರಕಾರ 4704 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 2591 ಸ್ಥಳೀಯ ಸಂಸ್ಥೆಗಳು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದ್ದು, ಉಳಿದ ನಗರ ಸ್ಥಳೀಯ ಸಂಸ್ಥೆಗಳು ಜೂನ್ 30 ರೊಳಗೆ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿಗಳು, ಸ್ವಯಂಸೇವಕರು, ಸ್ವಯಂ ಸೇವಾ ಸಂಸ್ಥೆಗಳು, ನಾಗರಿಕರೊಂದಿಗೆ ಬೃಹತ್ ಪ್ರಮಾಣದಲ್ಲಿ ಪ್ಲಾಸ್ಟಿಕ್ ಕಸ ಸಂಗ್ರಹ ಅಭಿಯಾನ, ಗಿಡನೆಡುವ ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ತಿಳಿಸಲಾಗಿದೆ.