alex Certify BIG NEWS: ಧೂಮಪಾನ ವಯಸ್ಸಿನ ಮಿತಿ 21 ವರ್ಷಕ್ಕೆ ಏರಿಕೆ –ಲೂಸ್ ಸಿಗರೇಟ್ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧೂಮಪಾನ ವಯಸ್ಸಿನ ಮಿತಿ 21 ವರ್ಷಕ್ಕೆ ಏರಿಕೆ –ಲೂಸ್ ಸಿಗರೇಟ್ ಮಾರಾಟ ನಿಷೇಧ

ನವದೆಹಲಿ: ಶೀಘ್ರದಲ್ಲಿಯೇ ಲೂಸ್ ಸಿಗರೇಟ್ ಮಾರಾಟ ನಿಷೇಧಿಸಲಾಗುವುದು. ಧೂಮಪಾನ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಏರಿಕೆ ಮಾಡಲಾಗುವುದು.

ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಬಳಕೆಯ ವಯಸ್ಸಿನ ಮಿತಿಯನ್ನು 21 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರ ಕರಡು ಮಸೂದೆ ಸಿದ್ಧಪಡಿಸಿದೆ. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ(ಕೊಪ್ಟಾ) ಅಡಿಯಲ್ಲಿ ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದ ತಿದ್ದುಪಡಿಯಲ್ಲಿ ಧೂಮಪಾನ ಅಥವಾ ತಂಬಾಕು ಉತ್ಪನ್ನಗಳು ಮತ್ತು ಸಿಗರೇಟುಗಳ ಸೇವನೆಯ ಕಾನೂನುಬದ್ಧ ವಯಸ್ಸನ್ನು ಪ್ರಸ್ತುತ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಆರೋಗ್ಯ ಸಚಿವಾಲಯ ಮುಂದಾಗಿದೆ.

ಲೂಸ್ ಸಿಗರೆಟ್ ಮಾರಾಟವನ್ನು ನಿಷೇಧಿಸುವ ಕುರಿತು ಕರಡು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ(ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ಮತ್ತು ವಿತರಣೆಯ ಜಾಹೀರಾತು ಮತ್ತು ನಿಯಂತ್ರಣ) ಕಾಯ್ದೆ -2020 ಕರಡನ್ನು ಸರ್ಕಾರ ಸಿದ್ಧಪಡಿಸಿದ್ದು, ರೆಸ್ಟೋರೆಂಟ್, ವಿಮಾನ ನಿಲ್ದಾಣಗಳಲ್ಲಿ ಮತ್ತು ಗೊತ್ತುಪಡಿಸಲಾದ ಸ್ಥಳಗಳಲ್ಲಿ ಧೂಮಪಾನ ನಿಷೇಧ ಉಲ್ಲಂಘನೆಗಾಗಿ ದಂಡದ ಪ್ರಮಾಣವನ್ನು ಹೆಚ್ಚಿಸಲಾಗುತ್ತಿದೆ.

ಶಿಕ್ಷಣ ಸಂಸ್ಥೆಯ 100 ಮೀಟರ್ ವ್ಯಾಪ್ತಿಯಲ್ಲಿ ಇಂತಹ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ನಿಯಮ ಉಲ್ಲಂಘನೆಗಾಗಿ ಎರಡು ವರ್ಷದಿಂದ 7 ವರ್ಷದವರೆಗೆ ಶಿಕ್ಷೆ, 1000 ರೂಪಾಯಿಯಿಂದ ಒಂದು ಲಕ್ಷ ರೂಪಾಯಿವರೆಗೆ ದಂಡದ ಮೊತ್ತ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...