ನವದೆಹಲಿ: ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯ 12 ನೇ ಸರಣಿ ಮಾರ್ಚ್ 1 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 5 ರವರೆಗೆ ಇರುತ್ತದೆ. ಗ್ರಾಹಕರು ಈ ಅವಧಿಯೊಳಗೆ ತಮ್ಮ ಸಮೀಪದ ಅಂಚೆ ಕಚೇರಿಯ ಮೂಲಕ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಲ್ಲಿ ಹೂಡಿಕೆ ಮಾಡಿಕೊಳ್ಳಬಹುದು.
ಈ ಬಾಂಡ್ ಕೆಲವು ವೈಶಿಷ್ಟ್ಯಗಳನ್ನು ಹೊಂದಿದೆ. ಕನಿಷ್ಠ ಹೂಡಿಕೆ ಒಂದು ಗ್ರಾಂ ಆಗಿದ್ದು, ವ್ಯಕ್ತಿಗಳಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಗಳಿಗೆ 4 ಕೆಜಿ ಹಾಗೂ ಟ್ರಸ್ಟ್ ಮತ್ತು ಇದೇ ರೀತಿಯ ಘಟಕಗಳಿಗೆ 20 ಕೆಜಿ ಗರಿಷ್ಠ ಹೂಡಿಕೆಯಾಗಿರುತ್ತದೆ.
ಬಾಂಡ್ ಅವಧಿ 8 ವರ್ಷ ಬಾಂಡ್ ಅವಧಿ ಮುಗಿದಾಗ ಮಾರುಕಟ್ಟೆಯಲ್ಲಿರುವ ಚಿನ್ನದ ದರ ಮೊತ್ತವನ್ನು ನೀಡಲಾಗುವುದು. ವಾರ್ಷಿಕ ಶೇ.2.5 ರಷ್ಟು ನಿಶ್ಚಿತ ಬಡ್ಡಿಯೂ ಲಭ್ಯ. 5, 6 ಮತ್ತು 7ನೇ ವರ್ಷಗಳಲ್ಲಿಯೂ ಸಹ ನಿರ್ಗಮಿಸುವ ಅವಕಾಶವಿದೆ. ಸಾಲಗಳಿಗೆ ಮೇಲಾಧಾರವಾಗಿಯೂ ಉಪಯೋಗಿಸಬಹುದು.
ಭಾರತ ಸರ್ಕಾರವು ರಿಸರ್ವ್ ಬ್ಯಾಂಕ್‌ನೊಂದಿಗೆ ಸಮಾಲೋಚಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೂಡಿಕೆದಾರರಿಗೆ ಪ್ರತಿ ಗ್ರಾಂಗೆ 50 ರೂ. ರಿಯಾಯಿತಿ ನೀಡಲು ನಿರ್ಧರಿಸಿದೆ. ಸಾರ್ವಭೌಮ ಚಿನ್ನದ ಬಾಂಡ್‌ಗಳ ವಿತರಣಾ ದರವನ್ನು ಪ್ರತಿ ಗ್ರಾಂಗೆ 4,662 ರೂ. ನಿಗದಿಪಡಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ತಿಳಿಸಿದೆ.