alex Certify ರೈತರ ಸಾಲ ಮನ್ನಾ, ಯಶಸ್ವಿನಿ ಯೋಜನೆ ಮತ್ತೆ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಸಾಲ ಮನ್ನಾ, ಯಶಸ್ವಿನಿ ಯೋಜನೆ ಮತ್ತೆ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮಡಿಕೇರಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದ್ದಾರೆ.

ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತ ಸಹಕಾರ ಭವನದಲ್ಲಿ ಸೋಮವಾರ ನಡೆದ ‘ಕುಶಾಲನಗರ ಸಹಕಾರ ಸಂಘದ ಶತಮಾನೋತ್ಸವ’ ಸಮಾರಂಭ ಹಾಗೂ ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಮಾದರಿಯಲ್ಲಿ ಕೆಲವು ಬದಲಾವಣೆಗಳೊಂದಿಗೆ ಸುಲಭ ವ್ಯವಸ್ಥೆಯಲ್ಲಿ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲು ಯೋಚಿಸಲಾಗಿದೆ ಎಂದು ನುಡಿದರು.

ರಾಜ್ಯದಲ್ಲಿ ಸುಮಾರು 9 ಲಕ್ಷ ಮಹಿಳಾ ಹಾಲು ಉತ್ಪಾದಕರು ಸೇರಿದಂತೆ ಒಟ್ಟು 26 ಲಕ್ಷ ಹಾಲು ಉತ್ಪಾದಕರಿಗೆ ಸುಗಮವಾಗಿ ಸಾಲ ಸೌಲಭ್ಯ ದೊರೆಯುವಂತಾಗಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

ರಾಜ್ಯದಲ್ಲಿ 6 ಸಾವಿರ ಕೋಟಿ ರೂ. ಗೂ ಹೆಚ್ಚು ಸಾಲ ಮನ್ನಾ ಮಾಡಲಾಗಿದೆ. ಇನ್ನೂ 31 ಸಾವಿರ ರೈತರ ಸಾಲ ಮನ್ನಾಕ್ಕೆ ಬಾಕಿ ಇದ್ದು, ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ ಎಂದು ಸಹಕಾರ ಸಚಿವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...