ಮೈಸೂರು: ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಮೊದಲನೇ ಹಂತದಲ್ಲಿ 10 ಸಾವಿರ ರೂ.ಗಳ ಸಾಲ ಸೌಲಭ್ಯ ಪಡೆದು ಮರುಪಾವತಿ ಮಾಡಿರುವವರಿಗೆ 2ನೇ ಅವಧಿಗೆ 20 ಸಾವಿರ ರೂ.ಗಳ ಕಿರುಸೌಲಭ್ಯ ಪಡೆಯಲು ಬೀದಿಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಸರಗೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.