
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭಿಸಿದೆ.
ರಾಜ್ಯದಲ್ಲಿ ನೋಂದಣಿ ಇಲಾಖೆ ಕಚೇರಿ ಮತ್ತು ಉಪ ನೋಂದಣಾಧಿಕಾರಿ ಕಚೇರಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದು, ಕೋರೋನಾ ಮಾರ್ಗಸೂಚಿಗಳನ್ನು ಅನುಸರಿಸಿ ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿ ಕಚೇರಿ ಮತ್ತು ಉಪ ನೋಂದಣಾಧಿಕಾರಿ ಕಚೇರಿಗಳನ್ನು ತೆರೆಯಲು ಸೂಚನೆ ನೀಡಿದ್ದಾರೆ.