ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಲಿರುವ ಬಜೆಟ್ ನಲ್ಲಿ ರೈತರಿಗೆ ವಿಶೇಷ ಗಿಫ್ಟ್ ನೀಡುವ ಸಾಧ್ಯತೆ ಇದೆ.
ರೈತರು ಬಳಸುವ ಡೀಸೆಲ್ ಗೆ ಸಬ್ಸಿಡಿ ನೀಡಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರಸ್ತಾವನೆ ಸಿದ್ದಪಡಿಸಿದ್ದು, ಸಿಎಂಗೆ ಸಲ್ಲಿಸಿ ಬಜೆಟ್ ನಲ್ಲಿ ಘೋಷಿಸಲು ಮನವಿ ಮಾಡಲಿದ್ದಾರೆ ಎನ್ನಲಾಗಿದೆ.
ಪ್ರತಿ ಎಕರೆ ಕೃಷಿ ಜಮೀನಿನಲ್ಲಿ ವ್ಯವಸಾಯಕ್ಕೆ ವರ್ಷಕ್ಕೆ ಕನಿಷ್ಠ 25 ಲೀಟರ್ ಡೀಸೆಲ್ ಬೇಕಾಗಲಿದ್ದು, ಇದಕ್ಕೆ ಸಬ್ಸಿಡಿ ನೀಡಬೇಕು. 48 ಲಕ್ಷ ರೈತರಿಗೆ 1300 ಕೋಟಿ ರೂಪಾಯಿ ಬೇಕಾಗಬಹುದು ಎಂದು ಅಂದಾಜಿಸಲಾಗಿದ್ದು, ಜಮೀನು ಹೊಂದಿದ ರೈತರಿಗೆ ಈ ಸೌಲಭ್ಯ ಕಲ್ಪಿಸಬೇಕೆಂದು ಮನವಿ ಮಾಡಲಾಗುವುದು.
5 ಎಕರೆವರೆಗೆ ರೈತರಿಗೆ ಡೀಸೆಲ್ ಗಾಗಿ ಸಬ್ಸಿಡಿ ನೀಡಲು ಚಿಂತನೆ ನಡೆಸಲಾಗಿದೆ. ಮೀನುಗಾರರಿಗೆ ಡೀಸೆಲ್ ಗೆ ಸಬ್ಸಿಡಿ ನೀಡುತ್ತಿರುವ ಮಾದರಿಯಲ್ಲಿ ರೈತರಿಗೆ ಸಬ್ಸಿಡಿ ನೀಡಲು ಯೋಜಿಸಲಾಗಿದೆ ಎಂದು ಹೇಳಲಾಗಿದೆ.