ಬೆಂಗಳೂರು: ಕಬ್ಬಿನ ಉಪ ಉತ್ಪನ್ನವಾದ ಎಥೆನಾಲ್ ಗೆ ಸಂಬಂಧಿಸಿದಂತೆ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಸಂಬಂಧವಾಗಿ ಇಂದು ಆದೇಶ ಹೊರಡಿಸಲಾಗಿದೆ.
ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಬೇಕು ಎಂದು ಆಗ್ರಹಿಸಿ ರೈತರು ಹೋರಾಟ ನಡೆಸುತ್ತಿದ್ದರು. ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಡಿ.5 ರಂದು ನಡೆದ ಕಬ್ಬು ನಿಯಂತ್ರಣ ಮಂಡಳಿಯ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ. ಹೆಚ್ಚುವರಿಯಾಗಿ ಪಾವತಿಸುವ ಘೋಷಣೆ ಮಾಡಿದ್ದು, ಅದೇ ಪ್ರಕಾರವಾಗಿ ಆದೇಶ ಹೊರಡಿಸಲಾಗಿದೆ.
ಕಬ್ಬಿನ ಎಫ್.ಆರ್.ಪಿ. ಹೆಚ್ಚಳ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.