ನವದೆಹಲಿ: ಸಾಲಗಳ ಇಎಂಐ ಮುಂದೂಡಿಕೆ ಸಂದರ್ಭದಲ್ಲಿ ಬಡ್ಡಿ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರವೇ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ.
ಮೊರಾಟೋರಿಯಂ ಸಂದರ್ಭದಲ್ಲಿ ಮುಂದೂಡಲಾಗಿದ್ದ ಸಾಲದ ಕಂತುಗಳಿಗೆ ಬಡ್ಡಿ, ಚಕ್ರಬಡ್ಡಿ ವಿಧಿಸುವ ಮತ್ತು ಮರುಪಾವತಿ ವಿಳಂಬಕ್ಕೆ ಕ್ರೆಡಿಟ್ ರೇಟಿಂಗ್ ಬದಲಿಸುವ ವಿಚಾರದಲ್ಲಿ ಎರಡು ಮೂರು ದಿನದೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆರು ತಿಂಗಳು ಸಾಲದ ಇಎಂಐ ಅವಧಿ ಮುಂದೂಡಿಕೆಗೆ ಗ್ರಾಹಕರಿಗೆ ಅವಕಾಶ ನೀಡಲಾಗಿದ್ದು ಈ ಅವಧಿಯಲ್ಲಿ ಬಡ್ಡಿ ಹಾಕುವ ಬ್ಯಾಂಕುಗಳ ನಿರ್ಧಾರವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಬಗ್ಗೆ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿ ಮುಂದೂಡಲಾಗಿರುವ ಸಾಲದ ಕಂತುಗಳಿಗೆ ಬಡ್ಡಿ ಮನ್ನಾ ವಿಷಯದಲ್ಲಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.