alex Certify ಬ್ಯಾಂಕ್ ಸಾಲ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್…? ಇಎಂಐ ಬಡ್ಡಿ ಮನ್ನಾ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಸಾಲ ಪಡೆದವರಿಗೆ ಭರ್ಜರಿ ಗುಡ್ ನ್ಯೂಸ್…? ಇಎಂಐ ಬಡ್ಡಿ ಮನ್ನಾ ಸಾಧ್ಯತೆ

ನವದೆಹಲಿ: ಸಾಲಗಳ ಇಎಂಐ ಮುಂದೂಡಿಕೆ ಸಂದರ್ಭದಲ್ಲಿ ಬಡ್ಡಿ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರವೇ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿದೆ.

ಮೊರಾಟೋರಿಯಂ ಸಂದರ್ಭದಲ್ಲಿ ಮುಂದೂಡಲಾಗಿದ್ದ ಸಾಲದ ಕಂತುಗಳಿಗೆ ಬಡ್ಡಿ, ಚಕ್ರಬಡ್ಡಿ ವಿಧಿಸುವ ಮತ್ತು ಮರುಪಾವತಿ ವಿಳಂಬಕ್ಕೆ ಕ್ರೆಡಿಟ್ ರೇಟಿಂಗ್ ಬದಲಿಸುವ ವಿಚಾರದಲ್ಲಿ ಎರಡು ಮೂರು ದಿನದೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆರು ತಿಂಗಳು ಸಾಲದ ಇಎಂಐ ಅವಧಿ ಮುಂದೂಡಿಕೆಗೆ ಗ್ರಾಹಕರಿಗೆ ಅವಕಾಶ ನೀಡಲಾಗಿದ್ದು ಈ ಅವಧಿಯಲ್ಲಿ ಬಡ್ಡಿ ಹಾಕುವ ಬ್ಯಾಂಕುಗಳ ನಿರ್ಧಾರವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು. ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಬಗ್ಗೆ ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿ ಮುಂದೂಡಲಾಗಿರುವ ಸಾಲದ ಕಂತುಗಳಿಗೆ ಬಡ್ಡಿ ಮನ್ನಾ ವಿಷಯದಲ್ಲಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...