
ಚೆನ್ನೈ: ತಮಿಳುನಾಡು ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ತಮಿಳುನಾಡಿನಲ್ಲಿ ಪೆಟ್ರೋಲ್ ದರವನ್ನು 3 ರೂಪಾಯಿ ಇಳಿಕೆ ಮಾಡಲಾಗಿದೆ
ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ಅನ್ನು 3 ರೂಪಾಯಿ ಕಡಿಮೆ ಮಾಡಲಾಗಿದೆ. ಸಿಎಂ ಸ್ಟಾಲಿನ್ ಅಧಿಕಾರಕ್ಕೆ ಬಂದ ನಂತರ ಡಿಎಂಕೆ ಸರ್ಕಾರದ ಚೊಚ್ಚಲ ಬಜೆಟ್ ನಲ್ಲಿ ಸೆಸ್ ಕಡಿತ ಮಾಡಲಾಗಿದೆ. ಪೆಟ್ರೋಲ್ ಬೆಲೆ ಇಳಿಕೆಯಿಂದ 1160 ಕೋಟಿ ರೂಪಾಯಿ ಹೊರೆಯಾಗಲಿದೆ ಎನ್ನಲಾಗಿದೆ.
ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ತಮಿಳುನಾಡು ಹಣಕಾಸು ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಪೆಟ್ರೋಲ್ ಮೇಲಿನ ತೆರಿಗೆ ಕಡಿತದಿಂದ ಪ್ರತಿ ಲೀಟರ್ ಗೆ 3 ಕಡಿಮೆಯಾಗಲಿದೆ ಎಂದಿದ್ದಾರೆ.