ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಏರ್ ಇಂಡಿಯಾದ ಅಧ್ಯಕ್ಷರಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ANI ಸೋಮವಾರ ವರದಿ ಮಾಡಿದೆ.
ಏರ್ ಇಂಡಿಯಾ ಸೋಮವಾರ ನಡೆಸಿದ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರಲ್ ಇನ್ಶೂರೆನ್ಸ್ ಕಾರ್ಪೊರೇಶನ್‌ನ ಮಾಜಿ ಸಿಎಂಡಿ ಆಲಿಸ್ ಗೀವರ್ಗೀಸ್ ವೈದ್ಯನ್ ಅವರು ಸಹ ಮಂಡಳಿಯಲ್ಲಿ ಸ್ವತಂತ್ರ ನಿರ್ದೇಶಕರಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.
ಟರ್ಕಿಯ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಮೆಹ್ಮೆತ್ ಇಲ್ಕರ್ ಐಸಿ ಅವರು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಲು ಟಾಟಾ ಗ್ರೂಪ್‌ನ ಪ್ರಸ್ತಾಪವನ್ನು ನಿರಾಕರಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆಯು ಬಂದಿದೆ,
ಸಾಲದ ಸುಳಿಯಲ್ಲಿ ಸಿಲುಕಿದ್ದ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾವನ್ನು ಟಾಟಾ ಗ್ರೂಪ್ ಕಳೆದ ವರ್ಷ ಅಕ್ಟೋಬರ್ ನಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿತ್ತು. 2,700 ಕೋಟಿ ರೂಪಾಯಿಗಳ ನಗದು ಘಟಕ ಒಳಗೊಂಡಂತೆ 18,000 ಕೋಟಿ ರೂಪಾಯಿಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ಮೂಲಕ ಏರ್ ಇಂಡಿಯಾದ ಬಿಡ್ ಅನ್ನು ಟಾಟಾಸ್ ಗೆದ್ದಿದೆ. ಇದು ಜನವರಿ 27 ರಂದು ವಿಮಾನಯಾನದ ಸಂಪೂರ್ಣ ನಿಯಂತ್ರಣವನ್ನು ತನ್ನ ತೆಕ್ಕೆ ತೆಗೆದುಕೊಂಡಿತು.