alex Certify ಪ್ರಯಾಣಿಕ ವಾಹನಗಳ ತೆರಿಗೆ: ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕ ವಾಹನಗಳ ತೆರಿಗೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಯಾಣಿಕ ವಾಹನಗಳಿಗೆ ಪಾವತಿಯನ್ನು ಸರ್ಕಾರ ವಿಸ್ತರಣೆ ಮಾಡಿದೆ.

ಕರ್ನಾಟಕ ಮೋಟಾರು ವಾಹನ ಕಾಯ್ದೆ 1957 ರ ಅನ್ವಯ ನಿಯಮಗಳನ್ನು ಸಡಿಲಗೊಳಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಅನ್ವಯವಾಗುವಂತೆ ಏಪ್ರಿಲ್ 15 ರೊಳಗೆ ಪಾವತಿ ಮಾಡಬೇಕಿದ್ದ ವಾಹನ ತೆರಿಗೆಯನ್ನು ಏಪ್ರಿಲ್ 30 ರ ವರೆಗೆ ದಂಡ ರಹಿತವಾಗಿ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.

ಹೊಸ ವಾಹನಗಳ ನೋಂದಣಿ ಹೊರತುಪಡಿಸಿ ಎಲ್ಲ ನೊಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ತೆರಿಗೆ ಪಾವತಿ ಅವಧಿ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...